You are on page 1of 6

ಜಾಗತಿಕ ಅನುಭಾವ ಮಂಟಪದಲ್ಲಿ ಶನಿವಾರ ಮತ್ತು ರವಿವಾರ ಸಾಯಂಕಾಲ 5 PM ರಿಂದ 6 PM ರ ವರೆಗೆ ಜರುಗುವ

ವಚನಾನುಭಾವ ಕಾನ್ಫರೆನ್ಸ್ ಕಾಲ್ ನಲ್ಲಿ ಭಾಗವಹಿಸಲು:

ಶುಲ್ಕ ರಹಿತ ದೂರವಾಣಿ ಸಂಖ್ಯ: 0172 510 0945

ಮೀಟಿಂಗ ಅಕ್ಸೆಸ್ ಕೋಡ್: 119500#

ಇಂಟರ್ನೆಟ್ ಮೂಲಕ ನೇರವಾಗಿ ವಚನಾನುಭಾವಕ್ಕೆ ಸೇರಲು ಕೆಳಗಿನ ಲಿಂಕ್ ನ್ನು ಒತ್ತಿರಿ.

https://join.freeconferencecall.com/shivasharana

Free Conference Call App install ಮಾಡಲು ಈ ಕೆಳಗಿನ ಲಿಂಕ್ ಒತ್ತಿ.

https://play.google.com/store/apps/details?id=com.freeconferencecall.fccmeetingclient

ದಿನಾಂಕ 08-08-2020, ಶನಿವಾರ 5 PM ರಿಂದ 6 PM ರ ವರೆಗೆ ಇಂದಿನ ಚರ್ಚೆಯ ವಿಷಯ:

ಜಾಗತಿಕ ಅನುಭಾವ ಮಂಟಪದಲ್ಲಿ ವಚನಾನುಭಾವದ ಕಾನ್ಫರೆನ್ಸ್ ಕಾಲ್ ನಲ್ಲಿ ಭಾಗಿಯಾಗಿರುವ ಎಲ್ಲ ಶರಣರಿಗೆ
ಶರಣಾರ್ಥಿಗಳು.

ಇಂದಿನ ಚರ್ಚೆಯ ವಿಷಯ:

*ಅಜ್ಞಾನದಿಂದ ಹುಟ್ಟಿತ್ತು, ಇನ್ನು ಹುಟ್ಟಿದಡೆ ನಿಮ್ಮಾಣೆ, ನಿಮ್ಮನರಿಯದ, ನೀ ದೇವನಲ್ಲ, ಹಿಂಡಲೇಕೋ ತೊಳೆಯಲೇಕೋ !


ವಾಙ್ಮನಕ್ಕಗೋಚರವೆಂದಡೆ, ಭಕ್ತಿಭಾವ, ಲಿಂಗಕಿರಣಂಗಳು, ತನ್ನಲ್ಲಿ ಅರಿವು ನಿಜವಪ್ಪುದು*

*ವಚನ ಚಿಂತನೆ*: ಶಿವಶರಣಪ್ಪ ಮದ್ದೂರ್

ನಿರ್ವಚಿಸಲ್ಪಡುವ ವಚನಗಳು:

1. ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ,


ಅಜ್ಞಾನದಿಂದ ಹುಟ್ಟಿತ್ತು ಮನಸ್ಸಂಚಲ,
ಅಜ್ಞಾನದಿಂದ ಹುಟ್ಟಿತ್ತು ಇಂದ್ರಿಯೋದ್ರೇಕ,
ಅಜ್ಞಾನದಿಂದ ಹುಟ್ಟಿತ್ತು ದೇಹಮೋಹ,
ಅಜ್ಞಾನದಿಂದ ಹುಟ್ಟಿತ್ತು ಅತಿಕಾಂಕ್ಷೆ,
ಅಜ್ಞಾನದಿಂದ ಹುಟ್ಟಿತ್ತು ತ್ರಿವಿಧಮಲ,
ಅಜ್ಞಾನದಿಂದ ಹುಟ್ಟಿತ್ತು ಸಂಸಾರ,
ಅಜ್ಞಾನದಿಂದ ಹುಟ್ಟಿತ್ತು ರಾಗದ್ವೇಷ,
ಅಜ್ಞಾನದಿಂದ ಹುಟ್ಟಿತ್ತು ಸರ್ವಪ್ರಪಂಚು,
ಅಜ್ಞಾನದಿಂದ ಹುಟ್ಟಿತ್ತು ಸರ್ವದುಃಖ,
ಕೂಡಲಸಂಗಮದೇವಾ, ಈ ಅಜ್ಞಾನಭ್ರಮೆಯ ಕೆಡಿಸಿದಲ್ಲದೆ
ನಿಮ್ಮನೊಡಗೂಡಬಾರದಯ್ಯಾ.

ಮರೆವಿನಿಂದ ಹುಟ್ಟು
2. ಅರಿಯದೆ ಜನನಿಯ ಜಠರದಲ್ಲಿ
ಬಾರದ ಭವಂಗಳ ಬರಿಸಿದೆ ತಂದೆ,
ಹುಟ್ಟಿತ್ತೆ ತಪ್ಪಾಯಿತ್ತೆ, ಎಲೆ ಲಿಂಗವೆ ?
ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ !
ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆ.

ಶಿವಜ್ಞಾನವಲ್ಲದುದೆಲ್ಲವೂ ಅಜ್ಞಾನ:
3. ಶ್ವಾನಜ್ಞಾನ, ಗಜಜ್ಞಾನ, ಕುಕ್ಕುಟಜ್ಞಾನವೆಂಬ
ಜ್ಞಾನತ್ರಯಂಗಳೇನಾದುವು
ಕೂಡಲಸಂಗಮದೇವಾ
ನಿಮ್ಮನರಿಯದ ಜ್ಞಾನವೆಲ್ಲಾ ಅಜ್ಞಾನ.

ಅರಿಯುವುದು ಹೇಗೆ:
4. ಜ್ಞಾನದಿಂದ ನಿಮ್ಮನರಿದಿಹೆನೆಂದಡೆ:
ಅರಿವಿಂಗೆ ಬಂದಾಗಲೆ ಕುರುಹು.
ಕುರುಹಿಂಗೆ ಕೇಡುಂಟು;
ಜ್ಞಾನವೆಂಬುದೇನು ? ಮನೋಭೇದ !
ಇಂತಪ್ಪ ಜ್ಞಾನದ ಕೈಯಲ್ಲಿ,
ಅರುಹಿಸಿಕೊಂಡಡೆ ನೀ ದೇವನಲ್ಲ,
ಅರಿಯದಿದ್ದಡೆ ನಾ ಶರಣನಲ್ಲ.
ನೀ ದೇವ, ನಾ ಶರಣನೆಂತಾದೆ ಹೇಳಾ ಗುಹೇಶ್ವರಾ ?

ಮೌಧ್ಯತೆ:
5. ನಿಮ್ಮನರಿಯದ ಕಾರಣ ಕೈಯಲ್ಲಿ ಹುಲ್ಲು !
ನಿಮಗೆರಗದ ಕಾರಣ ಕೊರಳಲ್ಲಿ ನೇಣು !
ಹಿಂಡಲೇಕೋ ತೊಳೆಯಲೇಕೋ !
ಮುಳುಗಿ ಮುಳುಗಿ ಮೂಗ ಹಿಡಿಯಲೇಕೋ !
ಕೂಡಲಸಂಗನ ಶರಣರಲ್ಲಿ
ಡೋಹರ ಕಕ್ಕಯ್ಯನಾವ ತೊರೆಯಲಿ ಮಿಂದ

ಅರಿವಿಂದಲರಿವೆನೆಂದಡೆ, ಭಾವಿಸಿ ಬೆರೆಸುವೆನೆಂದಡೆ, ವಾಙ್ಮನಕ್ಕಗೋಚರವೆಂದಡೆ


6. ಅರಿವಿಂದಲರಿವೆನೆಂದಡೆ ಅರಿವಿಂಗಸಾಧ್ಯ,
ಅರಿಯದೆ ಅರಿದ ಪರಿ ಎಂತಯ್ಯಾ
ಭಾವಿಸಿ ಬೆರೆಸುವೆನೆಂದಡೆ ಭಾವ ನಿರ್ಭಾವವೆಂದುದಾಗಿ
ಮತ್ತೆ ಭಾವಿಸಿಯಲ್ಲದೆ ಕಾಣಬಾರದಯ್ಯಾ.
ವಾಙ್ಮನಕ್ಕಗೋಚರವೆಂದಡೆ
ನುಡಿಯಲಿಲ್ಲದೆ ನಡೆ ಸಾಧ್ಯವಹ ಪರಿ ಎಂತು ಹೇಳಯ್ಯಾ
ಹಲವು ಮಾತಿನ ನಿಲವು ಒಂದೆಂಬ
ನುಡಿಗಡಣದ ನಿಜವ ಬಲ್ಲವರಾರು ಹೇಳಯ್ಯಾ
ನಿಮ್ಮ ಮಾತೆಂಬ ಪರತತ್ವವೊಂದಲ್ಲದೆ ಎರಡುಂಟೆ
ಕೂಡಲಸಂಗಮದೇವ ಕಡೆಮುಟ್ಟ ನೋಡುವಡೆ
ನುಡಿಗೆಡೆಯಿಲ್ಲ, ಕೃಪೆಯಿಂದ ಕರುಣವ ಮಾಡಯ್ಯಾ ಪ್ರಭುವೆ.

ಶರಣಾಗತ ಅರಿವಿನ ಭಕ್ತಿ:


7. ದೇಹಭಾವವಳಿದಲ್ಲದೆ ಜೀವಭಾವವಳಿಯದು. ಜೀವಭಾವವಳಿದಲ್ಲದೆ ಭಕ್ತಿಭಾವವಳವಡದು. ಭಕ್ತಿಭಾವವಳವಟ್ಟಲ್ಲದೆ
ಅರಿವು ತಲೆದೋರದು. ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ
ಹಿಂಗದು. ಇದು ಕಾರಣ;_ ಕಾಯದ ಜೀವದ ಹೊಲಿಗೆಯ ಅಳಿವ ಭೇದವ ತಿಳಿಯಬಲ್ಲಡೆ ಗುಹೇಶ್ವರಲಿಂಗದ ಅರಿವು
ಸಾಧ್ಯವಪ್ಪುದು ಕಾಣಾ ಸಿದ್ಧರಾಮಯ್ಯಾ.

ಶರಣನ ಅರಿವು:

8. ಭೂತವೈದರಿಂದ ಸ್ಥೂಲ ತನು.


ಮನ ಬುದ್ಧಿ ಚಿತ್ತ ಅಹಂಕಾರದಿಂದ ಸೂಕ್ಷ್ಮತನು.
ಭಾವಜ್ಞಾನದಿಂದ ಕಾರಣತನು._ಈ ತ್ರಿವಿಧವು ಚೈತನ್ಯವಿಡಿದ ಕಾರಣ,
ಭೂತ ಅಂತಃಕರಣ ಭಾವ ಜ್ಞಾನಕ್ಕೆ ಸ್ವತಂತ್ರತೆಯಿಲ್ಲ.
ಆ ಚೈತನ್ಯಕ್ಕೆ ಶರೀರಭಾವವಿಲ್ಲದಿರ್ದಡೆ ತೋರಿಕೆ ಇಲ್ಲವಾಗಿ
ಆ ಚೈತನ್ಯವೆ ತನ್ನ ಲೀಲೆಯಿಂದ ಶರಣನೆನಿಸಿತ್ತು.
ಆ ಶರಣನ ಪಂಚಭೌತಿಕ ತನುವ ಇಷ್ಟಲಿಂಗ ಇಂಬುಗೊಂಡಿಹ ಕಾರಣ,
ಕಾಯ ಪಂಚಬ್ರಹ್ಮಮಯವಾಯಿತ್ತು.
ಅಂತಃಕರಣ[ವ] ಅಂತಃಪ್ರೇರಕ ಪ್ರಾಣಚೈತನ್ಯಲಿಂಗವೊಳಕೊಂಡ ಕಾರಣ
ಶರಣನ ಕರಣಂಗಳೆ ಲಿಂಗಕಿರಣಂಗಳಾದವು.
ಭಾವ ಜ್ಞಾನವೆಡೆಗೊಂಡು [ಲಿಂಗ] ತೃಪ್ತಿಸ್ವರೂಪದಿಂದ
ಆನಂದಮಯವಪ್ಪ ಕಾರಣ,
ಶರಣ ಸಚ್ಚಿನ್ಮಯನಾದ_ಇದು ಕಾರಣ,
ಗುಹೇಶ್ವರಾ ನಿಮ್ಮ ಶರಣರ ದೃಷ್ಟಲಿಂಗವೆಂಬೆ !

ನಿನ್ನೊಳಗೆ ಅರಿವು ಭಿನ್ನವಾಗಿರುತ್ತಿರಲು

9. ತನ್ನ ತಾನರಿದೆನೆಂಬವನ ಮುನ್ನ ನುಂಗಿತ್ತು ಮಾಯೆ. ನಿನ್ನೊಳಗೆ ಅರಿವು ಭಿನ್ನವಾಗಿರುತ್ತಿರಲು ಮುನ್ನವೆ ನೀನು
ದೂರಸ್ಥ ನೋಡಾ ! ಭಿನ್ನವಿಲ್ಲದೆ ಅಜ್ಞಾನವ ಭಿನ್ನವ ಮಾಡಬಲ್ಲಡೆ ತನ್ನಲ್ಲಿ ಅರಿವು ನಿಜವಪ್ಪುದು ಗುಹೇಶ್ವರಾ

ಜಾಗತಿಕ ಅನುಭಾವ ಮಂಟಪದಲ್ಲಿ ಶನಿವಾರ ಮತ್ತು ರವಿವಾರ ಸಾಯಂಕಾಲ 5 PM ರಿಂದ 6 PM ರ ವರೆಗೆ ಜರುಗುವ
ವಚನಾನುಭಾವ ಕಾನ್ಫರೆನ್ಸ್ ಕಾಲ್ ನಲ್ಲಿ ಭಾಗವಹಿಸಲು:

ಶುಲ್ಕ ರಹಿತ ದೂರವಾಣಿ ಸಂಖ್ಯ: 0172 510 0945

ಮೀಟಿಂಗ ಅಕ್ಸೆಸ್ ಕೋಡ್: 119500#

ಇಂಟರ್ನೆಟ್ ಮೂಲಕ ನೇರವಾಗಿ ವಚನಾನುಭಾವಕ್ಕೆ ಸೇರಲು ಕೆಳಗಿನ ಲಿಂಕ್ ನ್ನು ಒತ್ತಿರಿ.

https://join.freeconferencecall.com/shivasharana

Free Conference Call App install ಮಾಡಲು ಈ ಕೆಳಗಿನ ಲಿಂಕ್ ಒತ್ತಿ.

https://play.google.com/store/apps/details?id=com.freeconferencecall.fccmeetingclient

ದಿನಾಂಕ 09-08-2020, ರವಿವಾರ 5 PM ರಿಂದ 6 PM ರ ವರೆಗೆ *ವಚನಾನುಭಾವ*: ಶಿವಶರಣಪ್ಪ ಮದ್ದೂರ್ ರವರಿಂದ

ಜಾಗತಿಕ ಅನುಭಾವ ಮಂಟಪದಲ್ಲಿ ವಚನಾನುಭಾವದ ಕಾನ್ಫರೆನ್ಸ್ ಕಾಲ್ ನಲ್ಲಿ ಭಾಗಿಯಾಗಿರುವ ಎಲ್ಲ ಶರಣರಿಗೆ
ಶರಣಾರ್ಥಿಗಳು.
ಇಂದಿನ ಅನುಭಾವ *ಅರಿವು*: (1) ನಿರ್ವಿಕಾರ ನಿತ್ಯ ನಿರಂಜನ ನಿರ್ಗುಣ ಪರಿಪೂರ್ಣ ನಿರ್ವಿಕಲ್ಪ, (2) ಉಪಮೆ
ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು, (3) ಭಾವನಾಸ್ತಿಯಾದಲ್ಲದೆ ಅರಿವು ನೆಲೆಗೊಳ್ಳದು, (4) ಅರಿವು ಆಚಾರದಲ್ಲಿ
ಸಮವೇಧಿಸಿದ ಲಿಂಗೈಕ್ಯ, (5) ಸಾವನರಿಯದ ಅರೆಮರುಳಗಳು, (6) ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿವಿಧಸಾಧನ, (7) ಅರಿವು
ಸಯವಾಗಿ ದೊರೆಕೊಂಡ ಬಳಿಕ; ಗುರುವಾರು ? ಲಿಂಗವಾರು ?, (8) ಅರಿವು ಅರಿವು ಎನುತಿಪ್ಪಿರಿ, ಅರಿವು ಸಾಮಾನ್ಯವೆ? (9)
ನಿಮ್ಮಲ್ಲಿ ನೀವು ತಿಳಿದು ನೋಡಿದರೆ ಅನ್ಯವಿಲ್ಲ, (10) ನಿಮ್ಮ ಅರಿದ ಅರಿವ ಭಿನ್ನವಿಟ್ಟು ಕಂಡೆನಾದಡೆ, (11) ಕಾಯಗುಣ
ನಾಸ್ತಿಯಾದುದೆ ವಿಭೂತಿ

ನಿರ್ವಚಿಸಲ್ಪಡುವ ವಚನಗಳು:

1. ಸಮುದ್ರದೊಳಗೆ ನೊರೆ ತೆರೆಗಳು ನೆಗಳ್ದವೆಂದಡೆ ತಾ ಸಮುದ್ರದಿಂದ ಅನ್ಯವಪ್ಪವೆ ? ನಿರ್ವಿಕಾರ ನಿತ್ಯ ನಿರಂಜನ


ನಿರ್ಗುಣ ಪರಿಪೂರ್ಣ ನಿರ್ವಿಕಲ್ಪ ಪರಬ್ರಹ್ಮಶಿವನಿಂದ ಜಗತ್ತು ಉದಯಿಸಿತ್ತು ಎಂದಡೆ ಶಿವನಿಂದ ಅನ್ಯವೆನಬಹುದೆ ?
ಇಂತಪ್ಪ ಅರಿವು, ನೀವು ಕೊಟ್ಟ ಸಮ್ಯಕ್ ಜ್ಞಾನಕ್ಕೆ ಅರಿದಪ್ಪುದಯ್ಯಾ ಗುಹೇಶ್ವರಾ

2. ಜ್ಞಾತೃವೆ ಅರಸುವುದು ಜ್ಞಾನವೆ ಅರಿವುದು. ಜ್ಞೇಯವೆ ನಿಶ್ಚಯಿಸುವುದು. ಈ ಜ್ಞಾತೃ ಜ್ಞಾನ ಜ್ಞೇಯವೆಂಬ


ತ್ರಿವಿಧಸಾಧನದಿಂದ ಲಿಂಗವನರಸಿ ಲಿಂಗವನರಿದು ಲಿಂಗವ ಬೆರಸಿ ಲಿಂಗವಾದ ಮತ್ತೆ, ಜ್ಞಾತೃ ಜ್ಞಾನ ಜ್ಞೇಯವೆಂಬ
ತ್ರಿವಿಧಭ್ರಾಂತಿಸೂತಕ ಹೋಯಿತ್ತು ನಿಜವಾಯಿತ್ತು ಕಾಣಾ ಗುಹೇಶ್ವರಾ

3. ಉಪಮೆ ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು. ಅರಿವು, ಅರಿವಿನ ಮರೆಯಲ್ಲಿರ್ದುದನರಿಯಲರಿಯದೆ,


ಪರಾಪರವೆಂದು ನುಡಿಯುತ್ತಿದ್ದಿತ್ತು. ಧ್ಯಾನ ಧ್ಯಾನಿಸಲರಿಯದೆ, ಧ್ಯಾನರೂಪಾತೀತನೆಂದು, ತದ್ಧ್ಯಾನಗೊಂಡಿತ್ತು.
ಜ್ಞಾತೃ ಜ್ಞಾನ ಜ್ಞೇಯಕ್ಕೆ ಇನ್ನಾವ ಜ್ಞಾನವೊ? ವೇದವಿಜ್ಞಾನವೆಂದುದಾಗಿ, `ತತ್ತ್ವಮಸಿ' ವಾಕ್ಯಂಗಳೆಲ್ಲವೂ
ಹುಸಿಯಾಗಿ ಹೋದವು. ಸಚ್ಚಿದಾನಂದವೆಂದುದಾಗಿ ದ್ವೈತಾದ್ವೈತಿಗಳೆಲ್ಲ ಸಂಹಾರವಾಗಿ ಹೋದರು. ಬಂದೂ
ಬಾರದ, ನಿಂದ ನಿರಾಳ ಗುಹೇಶ್ವರ. PAGE 1007

4. ತನುಗುಣನಾಸ್ತಿ ಮನಗುಣನಾಸ್ತಿ ಧನಗುಣನಾಸ್ತಿಯಾದಡೇನು ? ಭಾವನಾಸ್ತಿಯಾಗಿರಬೇಕು.


ಭಾವನಾಸ್ತಿಯಾದಲ್ಲದೆ ಅರಿವು ನೆಲೆಗೊಳ್ಳದು. ಅರಿವು ನೆಲೆಗೊಂಡಲ್ಲಿ ಕುರುಹಿಂಗೆ ಹೊರಗು ಕುರುಹಳಿದು ಕೂಡುವ
ಪರಮಸುಖವು, ಗುಹೇಶ್ವರಲಿಂಗದಲ್ಲಿ ನಿನಗೆ ಸಾಧ್ಯವಾದ ಪರಿಯ ಹೇಳಾ ಮಡಿವಾಳ ಮಾಚಯ್ಯಾ ?

5. ಅಹುದಹುದು, ಭಕ್ತಿಭಾವದ ಭಜನೆ ಎಂತಿರ್ದುದಂತೆ ಅಂತರಂಗದಲ್ಲಿ ಅರಿವು. ಆ ಅಂತರಂಗದ ಅರಿವಿಂಗೆ


ಆಚಾರವೆ ಕಾಯ. ಆಚಾರವೆಂಬ ಕಾಯವಿಲ್ಲದಡೆ ಅರಿವಿಂಗೆ ಆಶ್ರಯವಿಲ್ಲ. ಅರಿವು ಆಚಾರದಲ್ಲಿ ಸಮವೇಧಿಸಿದ
ಲಿಂಗೈಕ್ಯನ ಕ್ರಿಯಾಬದ್ಧನೆಂದು ನುಡಿದಡೆ ಪಂಚಮಹಾಪಾತಕ. ನಿನ್ನ ಅರಿವಿಂಗೆ ಆಚಾರವಾಗಿ, ಆಚಾರಕ್ಕೆ ಆಳಾಗಿ
ನಮ್ಮ ಗುಹೇಶ್ವರನು ನಿನ್ನ ಕೈವಶಕ್ಕೆ ಒಳಗಾದನು ನಿನ್ನ ಸುಖಸಮಾಧಿಯ ತೋರು, ಬಾರಾ ಸಿದ್ಧರಾಮಯ್ಯ
6. ಎಲ್ಲ ಎಲ್ಲವನರಿಯಬಹುದು; ಸಾವನರಿಯಬಾರದು. ಸರ್ವವಿದ್ಯೆ ಸಕಲವ್ಯಾಪ್ತಿಯನರಿಯಬಹುದು;
ಸಾವನರಿಯಬಾರದು. ಹರಿ ಬ್ರಹ್ಮ ಕಾಲ ಕಾಮ ದಕ್ಷಾದಿ ದೇವ ದಾನವ ಮಾನವರಿಗೆಲ್ಲಗೆಯೂ ಸಾವು !
ಮಹಾಪುರುಷರಿಗೆಯೂ ಸಾವು ! ಶಿವ ಶಿವಾ, ಈ ಸಾವನರಿಯದೀ ಲೋಕ ! ಪ್ರಪಂಚವ ಮರೆದು ಲಿಂಗದಲ್ಲಿ ನೆನಹು
ನೆಲೆಗೊಂಡಡೆ ಆ ಮಹಿಮಂಗೆ ಸಾವಿಲ್ಲ. ಈ ಸಾವನರಿಯದ ಅರೆಮರುಳಗಳ ಅರಿವು ಮಾನಹಾನಿ ಕಾಣಾ
ಗುಹೇಶ್ವರಾ. 502

7. ಸಿಡಿಲೊಡನೆ ಕಾದುವಂಗೆ ಕೊಡೆಯೊಂದು ಮರೆಯೆ ? ಪರ್ವತವ ಹೊರುವಂಗೆ ಸಿಂಬಿಯೊಂದು ಸಹಾಯವೆ ?


ಸಕ್ಕರೆಯ ಸವಿವುದಕ್ಕೆ ಬೇರೊಂದು ಪದಾರ್ಥವೆ ? ಗುಹೇಶ್ವರನ ಅರಿವುದಕ್ಕೆ ಕುರುಹು ಮುನ್ನೇಕೆ ?
ಅರಿವು ಉದಯವಾದಲ್ಲದೆ ಮರಹು ನಷ್ಟವಾಗದು. ಮರಹು ನಷ್ಟವಾದಲ್ಲದೆ ಅರಿವು ಸಯವಾಗದು. ಅರಿವು
ಸಯವಾಗಿ ದೊರೆಕೊಂಡ ಬಳಿಕ; ಗುರುವಾರು ? ಲಿಂಗವಾರು ? ಆವುದು ಘನ, ಆವುದು ಕಿರಿದು ಹೇಳಾ ?
ಗುಹೇಶ್ವರಲಿಂಗದಲ್ಲಿ ಅರಿದು ಮರೆದು ಉಪದೇಶವ ಹಡೆದಡೆ ಮುಂದೆ ನಿಜವೆಂತು ಸಾಧ್ಯವಪ್ಪುದು, ಹೇಳಾ
ಮಡಿವಾಳ ಮಾಚಯ್ಯಾ ?

8. ಅರಿವು ಅರಿವು ಎನುತಿಪ್ಪಿರಿ, ಅರಿವು ಸಾಮಾನ್ಯವೆ ? ಹಿಂದಣ ಹೆಜ್ಜೆಯ ನೋಡಿ ಕಂಡಲ್ಲದೆ ನಿಂದ
ಹೆಜ್ಜೆಯನರಿಯಬಾರದು. ಮುಂದಣ ಹೆಜ್ಜೆಯಳಿದಲ್ಲದೆ, ಒಂದು ಪಾದ ನೆಲೆಗೊಳ್ಳದು. ನೆಲನ ಬಿಟ್ಟು ಆಕಾಶದಲ್ಲಿ
ನಿಂದು ಮುಗಿಲೊಳಗೆ ಮಿಂಚಿದಲ್ಲದೆ ತಾನಾಗಬಾರದು. ಗುಹೇಶ್ವರನೆಂಬುದು ಬರಿದೆ ಬಹುದೆ ಹೇಳಿರೆ ? 719

9. ನಿಮ್ಮಲ್ಲಿ ನೀವು ತಿಳಿದು ನೋಡಿದರೆ:ಅನ್ಯವಿಲ್ಲ ಕಾಣಿರಣ್ಣಾ. ಅರಿವು ನಿಮ್ಮಲ್ಲಿಯೆ ತದ್ಗತವಾಗಿಯದೆ. ಅನ್ಯಭಾವವ


ನೆನೆಯದೆ ತನ್ನೊಳಗೆ ತಾನೆಚ್ಚರಬಲ್ಲಡೆ ತನ್ನಲ್ಲಿಯೆ ತನ್ಮಯವು ಗುಹೇಶ್ವರಲಿಂಗವು. 549

10. ಅರಿವುವಿಡಿದು, ಅರಿವನರಿದು, ಅರಿವೆ ನೀವೆಂಬ ಭ್ರಾಂತು ಎನಗಿಲ್ಲವಯ್ಯಾ, ಮರಹುವಿಡಿದು, ಮರಹ ಮರೆದು,
ಮರಹು ನೀವೆಂಬ ಮರಹಿನವ ನಾನಲ್ಲವಯ್ಯಾ. ದೇಹ ಪ್ರಾಣಂಗಳ ಹಿಂಗಿ, ದೇಹವಿಡಿದು, ದೇಹ ನಿಮ್ಮದೆಂಬ
ಭ್ರಾಂತುಸೂತಕಿ ನಾನಲ್ಲವಯ್ಯಾ. ನಿಮ್ಮ ಅರಿದ ಅರಿವ ಭಿನ್ನವಿಟ್ಟು ಕಂಡೆನಾದಡೆ ನಿಮ್ಮಾಣೆ ಕಾಣಾ,
ಕೂಡಲಸಂಗಮದೇವಾ.

11. ಅರಿವು ನಾಸ್ತಿಯಾದುದೆ ಗುರು, ಕುರುಹು ನಾಸ್ತಿಯಾದುದೆ ಲಿಂಗ, ಕಾಯಗುಣ ನಾಸ್ತಿಯಾದುದೆ ವಿಭೂತಿ,
ಕರಣಗುಣನಾಸ್ತಿಯಾದುದೆ ರುದ್ರಾಕ್ಷಿ, ಮರಹು ನಾಸ್ತಿಯಾದುದೆ ಮಂತ್ರ ಇಂತೀ ಪಂಚಾಚಾರ ಪ್ರತಿಷ್ಠೆಯುಳ್ಳಾತನೆ
ಕೂಡಲಚೆನ್ನಸಂಗಯ್ಯನಲ್ಲಿ ಸದಾಚಾರಿ.

You might also like